ಇಂದಿನಿಂದ ಡಿಸೆಂಬರ್ 07 ರವರೆಗೆ 3ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಇಂದಿನಿಂದ ಡಿಸೆಂಬರ್ 07 ರವರೆಗೆ 3ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಧಾರವಾಡ : ನವೆಂಬರ್ 07 ರಿಂದ ಡಿಸೆಂಬರ್ 07 ರವರೆಗೆ ನಡೆಯಲಿರುವ 3 ನೇ ಸುತ್ತಿನ ಕಾಲುಬಾಯಿ ಲಸಿಕೆಯನ್ನು ರೈತರು ತಮ್ಮ ಜಾನುವಾರುಗಳಿಗೆ ಹಾಕಿಸುವುದರ ಮೂಲಕ ಜಾನುವಾರುಗಳ ರಕ್ಷಣೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 07 ರಿಂದ ಡಿಸೆಂಬರ್ 07 ರವರೆಗೆ ನಡೆಯಲಿರುವ 3 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣದಡಿ 3ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 1,76,650 ಡೋಸ್ ಲಸಿಕೆ ಸರಬರಾಜು ಆಗಿದ್ದು, ಅದರಲ್ಲಿ 80 ಸಾವಿರ ಡೋಸ್ ಲಸಿಕೆಯನ್ನು ಮರುಹಂಚಿಕೆ ಮಾಡಲಾಗಿದೆ. ಉಳಿದ 96,650 ಡೋಸ್ ಲಸಿಕೆಯನ್ನು ದಾಸ್ತಾನಿಕರಿಸಲಾಗಿದೆ ಎಂದರು.

ಸಭೆಯ ನಂತರ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಭಿತ್ತಿಪತ್ರಗಳನ್ನು ಅಪರ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಉಮೇಶ ಕೊಂಡಿ ಸಭೆ ನಿರ್ವಹಿಸಿದರು. ಜಿಲ್ಲಾ ಆರೋಗ್ಯಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ವಿರೇಶ ತರ್ಲಿ, ತಾಲೂಕಾ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.