ಇಂದಿನಿಂದ 'ಪಂಚರತ್ನ ರಥಯಾತ್ರೆ' ಪುನರಾರಂಭ
ಬೆಂಗಳೂರು: ಮಳೆಯ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಪಂಚರತ್ನ ರಥಯಾತ್ರೆ ಇಂದಿನಿಂದ ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭೆ ಕ್ಷೇತ್ರದಲ್ಲಿ ಪುನಾರಂಭ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಮಳೆ ಬಿಡುವು ಕೊಟ್ಟ ಹಿನ್ನೆಲೆಯಲ್ಲಿ ರಥಯಾತ್ರೆ ನಡೆಯಲಿದೆ. ಇಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.