ಇಂದಿನಿಂದ ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ
ವಿಜಯಪುರ ಜಿಲ್ಲೆಯಲ್ಲಿ ಇಂದಿನಿಂದ (ಜ.17) ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ 6 ದಿನ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಸಂಚರಿಸಲಿದೆ. ಇಂಡಿ ಕ್ಷೇತ್ರದ ಚಿಮ್ಮಕಣೂರು ಗ್ರಾಮದಿಂದ ರಥಯಾತ್ರೆ ಆರಂಭವಾಗಲಿದ್ದು, ಇಂಡಿ, ಸಿಂದಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ, ಬಸವನಬಾಗೇವಾಡಿ, ಬಬಲೇಶ್ವರ ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿದೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಥಳೀಯ ಮುಖಂಡರು ಸಾಥ್ ನೀಡಲಿದ್ದಾರೆ.