ಇಂದಿನಿಂದ ಮೂರು ದಿನ 13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
ಇವತ್ತು ಬೆಂಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಗರಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಚಿಕ್ಕಬಳ್ಳಾಪುರ 23-16, ಮೈಸೂರು 24-19, ಹಾಸನ 23-17, ಮಂಗಳೂರು 30-24, ಉಡುಪಿ 31-24, ಉತ್ತರ ಕನ್ನಡ 30-19, ಶಿವಮೊಗ್ಗ 28-19, ದಾವಣಗೆರೆ 29-19, ತುಮಕೂರು 24-18 ತಾಪಮಾನ ದಾಖಲಾಗಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದ್ದು, ಬೆಳಗಿನ ಜಾವ ಶೀತಗಾಳಿ ಸುಳಿಯಲಿದೆ.
ಇದನ್ನು : ಹಣದ ವಿಚಾರದಲ್ಲಿ ಈ ರಾಶಿಯವರು ಎಚ್ಚರವಹಿಸದಿದ್ದರೆ ಕಷ್ಟ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ
ಕರಾವಳಿ ಭಾಗದಲ್ಲಿ ಮಳೆ
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡ್ಮೂರು ದಿನ ಇದೇ ಹವಾಮಾನ ಮುಂದುವರಿಯಲಿದೆ. ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ. ಸೋಮವಾರದಿಂದ ಮಂಗಳವಾದವರೆಗೆ ಜಿಲ್ಲೆಯಲ್ಲಿ 15.1 ಮಿ.ಮೀ.ನಷ್ಟು ಮಳೆಯಾಗಿದೆ. ಬಂಟ್ವಾಳ, ಮಂಗಳೂರು, ಮೂಡಬಿದಿರೆ, ಕಡಬ, ಸುಳ್ಯ ಹಾಗೂ ಪುತ್ತೂರು ಭಾಗದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿವೆ. ಬುಧವಾರ ಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ನಾಪೋಕ್ಲು ಭಾಗದಲ್ಲಿ ನಾಲ್ಕು ಸೆಂ.ಮೀ.ನಷ್ಟು ಮಳೆಯಾಗಿರೋದು ದಾಖಲಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗನಲ್ಲಿ ಒಣ ಹವೆ ಮುಂದುವರಿಯಲಿದೆ.
ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಿತ್ತು.
ತಮಿಳುನಾಡಿನ ರಾಜಧಾನಿ ಚೆನ್ನೈ ರಕ್ಕಸ ಮಳೆಗೆ ಸಿಲುಕಿದ್ದು, ಐವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 270ಕ್ಕೂ ಹೆಚ್ಚು ಗುಡಿಸಲುಗಳು, 70ಕ್ಕೈ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಇನ್ನ ಎರಡು ದಿನ ಸಹ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಚ್ಚರಿಕೆ ಸಹ ನೀಡಲಾಗಿದೆ. ಇಂದು ತಮಿಳುನಾಡಿನ ನಿರ್ದಿಷ್ಟ ಪ್ರದೇಶಗಳು ಮತ್ತು ನೆರೆಯ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ತಮಿಳುನಾಡಿನಲ್ಲಿ 20:30 ಗಂಟೆಗಳ ಅವಧಿಯಲ್ಲಿ 20 cm ಮಳೆಯಾಗಿದ್ದು ನಾಗಪಟ್ಟಣಂನಲ್ಲಿ 15 ಸೆಂ.ಮೀ ಗಿಂತ ಹೆಚ್ಚು ಮಳೆಯಾಗಿದೆ ಎಂದು IMD ವರದಿ ಮಾಡಿದೆ. ಇತ್ತ ಆಂಧ್ರ ಪ್ರದೇಶದಲ್ಲಿಯೂ ಮಳೆಯಾಗುತ್ತಿದ್ದು , ಕಡಲ ತೀರದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.