ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ : ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ : ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಸಿಎಂ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.

ಇಂದು ಬೆಳಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಇಂದು ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.