ಇಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ

ಪ್ರತಿ ವರ್ಷ ಡಿಸೆಂಬರ್ 9ರಂದು ಅಂತರರಾಷ್ಟ್ರೀಯ ಭ್ರಷ್ಟಚಾರ ವಿರೋಧಿ ದಿನವನ್ನು ಆಚರಣೆ ಮಾಡಲಾಗುತ್ತದೆ. ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಭ್ರಷ್ಟಾಚಾರ ತಡೆ & ಅದನ್ನು ಸಮರ್ಥವಾಗಿ ಎದುರಿಸುವ ಕ್ರಮಗಳನ್ನು ಬಲಡಿಸುವುದು ಈ ದಿನದ ಉದ್ದೇಶ. ಸಮಾಜದಲ್ಲಿ ಭ್ರಷ್ಟಾಚಾರ ಸಮಾಜಿಕ & ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಪಿಡುಗು. 2003ರಲ್ಲಿ ವಿಶ್ವಸಂಸ್ಥೆ ಸಮಾನ್ಯ ಸಭೆ ಈ ದಿನವನ್ನು ಪ್ರಾರಂಭಿಸಿತಾದರೂ, 2005ರಿಂದ ಈ ದಿನವನ್ನು ಆಚರಿಸಲಾಗುತ್ತಿದೆ.