ಇಂದು ಅಂತಾರಾಷ್ಟ್ರೀಯ ಪುರುಷರ ದಿನ

ಸಮಾಜದಲ್ಲಿ ಪುರುಷರ ಪಾತ್ರವನ್ನು ಗುರತಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19ರಂದು ಅಂತಾರಾಷ್ಟ್ರೀಯ ಪುರುಷರ ದಿನವನ್ನು ಆಚರಿಸಲಾಗುತ್ತದ. ಪುರುಷರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು, ಪುರುಷರ ಮಾನಸಿಕ ಆರೋಗ್ಯ, ಆತ್ಮಹತ್ಯೆ ತಡೆ ಸೇರಿದಂತೆ ಹಲವು ವಿಚಾರಗಳನ್ನಿಟ್ಟುಕೊಂಡು ಸುಮಾರು 75ಕ್ಕೂ ಹೆಚ್ಚು ದೇಶಗಳಲ್ಲಿ ಈ ದಿನ ಆಚರಿಸಲಾಗುತ್ತದೆ. ಈ ದಿನವನ್ನು 1999ರಲ್ಲಿ ವೆಸ್ಟ್ ಇಂಡೀಸ್‍ನ ಡಾ. ಜೆರೋಮ್ ಟೇಲಿಕ್ಸಿಂಗ್ ಮೊದಲ ಬಾರಿಗೆ ಆಚರಿಸಿದರು.