ಇಂದು ಅಮಿತ್‌ ಶಾ ಜಿಲ್ಲಾ ಪ್ರವಾಸ: ಮಂಗಳೂರಿನಲ್ಲಿ ಸಂಜೆ 5.20ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಇಂದು ಅಮಿತ್‌ ಶಾ ಜಿಲ್ಲಾ ಪ್ರವಾಸ: ಮಂಗಳೂರಿನಲ್ಲಿ ಸಂಜೆ 5.20ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಕ್ಷಿಣ ಕನ್ನಡ: ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಂಜೆ 5.20ಕ್ಕೆ ಬಿಜೆಪಿ ಪ್ರಮುಖ ನಾಯಕರ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಕೋರ್‌ ಕಮಿಟಿ ಸಬೆ ನಡೆಯಲಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮಂಗಳೂರಿನ ಕೆಂಜಾರು ಬಳಿಯ ಶ್ರೀದೇವಿ ಕಾಲೇಜು ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಇದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ , ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ನಾಯಕರು ಕೂಡ ಭಾಗಿಯಾಲಿದ್ದಾರೆ. ಮಂಗಳೂರು ವಿಭಾಗದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆ ಹಾಗೂ ಶಿವಮೊಗ್ಗ ವಿಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ ನಾಯಕರು ಭಾಗವಹಿಸಲಿದ್ದಾರೆ. ನಂತರ ರಾತ್ರಿ 7.30ಕ್ಕೆ ಮಂಗಳೂರಿನಿಂದ ಅಮಿತ್‌ ಶಾ ಪ್ರಯಾಣ ಬೆಳೆಸಲಿದ್ದಾರೆ.