ಇಂದು ಆರ್ ಸಿಬಿ - ಮುಂಬೈ ಇಂಡಿಯನ್ಸ್ ನಡುವೆ 'ಐಪಿಎಲ್' ಪಂದ್ಯ ; ವಾಹನ ನಿಲುಗಡೆಗೆ ನಿರ್ಬಂಧ ಹೇರಿದ ಬೆಂಗಳೂರು ಪೊಲೀಸ್

ಬೆಂಗಳೂರು : ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ನಡುವಿನ ಐಪಿಎಲ್ ಪಂದ್ಯಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರಿ ಸೂಚನೆ ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಸಂಚಾರಿ ಪೊಲೀಸರು ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಕ್ರೀಡಾಂಗಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿಂದ ಕೇಂದ್ರ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಸಂಚಾರ ವಿಭಾಗವು ಪಾರ್ಕಿಂಗ್ ಅನ್ನು ನಿರ್ಬಂಧಿಸಿದೆ.
ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್, ಮ್ಯೂಸಿಯಂ, ಕಸ್ತೂರಬಾ ರಸ್ತೆಗಳು, ಅಂಬೇಡ್ಕರ್ ವೀಧಿ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ, ವಿಟ್ಲ ಮಲ್ಯ ಮತ್ತು ನೃಪತುಂಗ ರಸ್ತೆಗಳಲ್ಲಿ ಸಂಜೆ 4 ರಿಂದ ರಾತ್ರಿ 11 ರವರೆಗೆ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.
ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಹಳೆಯ ಕೆಜಿಐಡಿ ಕಟ್ಟಡ, ಕಂಠೀರವ ಸ್ಟೇಡಿಯಂ ಮತ್ತು ಮೆಟ್ರೊ ಲೇನ್‌ನ ಕೆಳಗಿನ ಬಿಆರ್‌ವಿ ಮೈದಾನದಲ್ಲಿ ವಾಹನ ನಿಲುಗಡೆ ಮಾಡಲು ಜನರಿಗೆ ತಿಳಿಸಲಾಗಿದೆ.