ಇಂದು ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಏಕದಿನ ಸರಣಿಯ ಎರಡನೇ ಪಂದ್ಯ

ಇಂದು ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಏಕದಿನ ಸರಣಿಯ ಎರಡನೇ ಪಂದ್ಯ

ಇಂದು ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಏಕದಿನ ಸರಣಿಯ ಎರಡನೇ ಪಂದ್ಯ ಲಂಡನ್ ನಲ್ಲಿ ನಡೆಯಲಿದೆ. ಇಂಗ್ಲೆಂಡ್ ನ ಅನುಭವಿ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಹೊರತುಪಡಿಸಿ ಹೊಸ ಆಟಗಾರರನ್ನು ಒಳಗೊಂಡ ಇಂಗ್ಲೆಂಡ್ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ನ ಯುವ ಆಟಗಾರ ಸಾಕಿದ್ ಮೊಹಮ್ಮದ್ ಬೌಲಿಂಗ್ ದಾಳಿಗೆ ಪಾಕಿಸ್ತಾನ ತಂಡ ತತ್ತರಿಸಿ ಹೋಗಿತ್ತು ಇಂಗ್ಲೆಂಡ್ ತಂಡ ಪಾಕಿಸ್ತಾನದ ವಿರುದ್ಧ 9ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು.

ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡಕ್ಕೆ ಇಂದು ಗೆಲುವು ಅನಿವಾರ್ಯವಾಗಿದೆ ಅಂತರಾಷ್ಟ್ರೀಯ ಏಕದಿನ ಐಸಿಸಿ ರ್ಯಾಂಕಿಂಗ್ ನಲ್ಲಿ ಮೊದಲನೇ ಸ್ಥಾನದಲ್ಲಿರುವ ಬಾಬರ್ ಅಜಾಮ್ ಕಳೆದ ಪಂದ್ಯದಲ್ಲಿ ಕೇವಲ ಶೂನ್ಯಕ್ಕೆ ಔಟಾಗಿದ್ದರು. ಇಂಗ್ಲೆಂಡ್ ನ ಯುವ ಆಟಗಾರರು ಮಿಂಚುತ್ತಿದ್ದಾರೆ. ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡ 1-0 ಯಿಂದ ಮುನ್ನಡೆಯಲ್ಲಿದೆ.