ಇಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ.

ಇನ್ನೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಇಂದು ಕೂಡ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ. ಇದರೊಂದಿಗೆ ಚಳಿಯೂ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರ ಬರಲು ಪರದಾಡುವಂತಾಗಿದೆ.

ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.