ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ : ಕೋಲಾರದಲ್ಲೂ ಸಿದ್ದರಾಮಯ್ಯಗೆ ಟಿಕೆಟ್ ?
ಬೆಂಗಳೂರು : ಕರ್ನಾಟಕ ವಿಧಾಸಭೆ ಚುಣಾವಣೆಗೆ ಈಗಾಗಲೇ ಆಯೋಗವು ದಿನಾಂಕ ಘೋಷಣೆ ಮಾಡಿದ್ದು, ಮೇ. 10 ರಂದು ಮತದಾನ ನಡೆಯಲಿದ್ದು, ಮೇ. 13 ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಕರೆದಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಕುರಿತಂತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಈಗಾಗಲೇ 45 ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು, ಉಳಿದ 55 ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಯಲಿದೆ. ಚರ್ಚೆಯ ಬಳಿಕ ಏಪ್ರಿಲ್ 5 ರಂದು ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಎಂ.ಬಿ.ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಇಂದು ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಕೋಲಾರದಲ್ಲಿ ಸಿದ್ದರಾಮಯ್ಯಗೆ, ತೀರ್ಥಹಳ್ಳಿ ಕ್ಷೇತ್ರದಿಂದ ಕಿಮ್ಮಾನೆ ರತ್ನಾಕರ್ ಗೆ, ಪುಲಿಕೇಶಿ ನಗರದಿಂದ ಅಖಂಡ ಶ್ರೀನಿವಾಸ ಮೂರ್ತಿಗೆ, ಶಿಗ್ಗಾಂವಿ ಕ್ಷೇತ್ರದಿಂದ ವಿನಯ್ ಕುಲಕರ್ಣಿ, ಹರಿಹರ ಕ್ಷೇತ್ರದಿಂದ ರಾಮಪ್ಪ, ಧಾರವಾಡದಲ್ಲಿ ಮೋಹನ್ ಲಿಂಬಿಕಾಯಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.