ಗದಗ, ಬಾಗಲಕೋಟೆಯಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ

ಬಾಗಲಕೋಟೆಯಲ್ಲಿ ಇಂದು (ಜ.18) ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಕಾಳಿದಾಸ ಪ್ರೌಢಶಾಲೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಬೆಳಗ್ಗೆ 11ರಿಂದ ಮಧ್ಯಾಹ್ನ 2.30ರವರೆಗೆ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಗದಗ ನಗರದಲ್ಲಿಯೂ ಇಂದು ಪ್ರಜಾಧ್ವನಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಭರದ ಸಿದ್ದತೆ ನಡೆಯುತ್ತಿದ್ದು, ಬೃಹತ್ ವೇದಿಕೆ ಸಿದ್ದವಾಗುತ್ತದೆ. ಇಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.