ಇಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಇಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಮಂಗಳೂರು: ಕರ್ನಾಟಕ ಸರ್ಕಾರ ಕನ್ನಡ & ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ & ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಆಶ್ರಯದಲ್ಲಿ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಂಡ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆ ಇಂದು (ನ.19) ಲೋಕಾರ್ಪಣೆಗೊಳ್ಳಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.