ಇಂದು ಕೊಪ್ಪಳ ಜಿಲ್ಲೆಗೆ 'ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ' ಆಗಮನ

ಇಂದು ಕೊಪ್ಪಳ ಜಿಲ್ಲೆಗೆ 'ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ' ಆಗಮನ

ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೊಪ್ಪಳಕ್ಕೆ ಆಗಮಿಸಲಿದ್ದು , 10 ಬಿಜೆಪಿ ಜಿಲ್ಲಾ ಕಚೇರಿ ಉದ್ಘಾಟಿಸಲಿದ್ದಾರೆ. ಇಂದು ಬೆಳಗ್ಗೆ 11.45ಕ್ಕೆ ಕೊಪ್ಪಳಕ್ಕೆ ಜೆಪಿ ನಡ್ಡಾ ಆಗಮಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಸಮವೇಶ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂಪ್ಪ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ.