ಇಂದು ಗುಡುಗು ಸಹಿತ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಇದರಲ್ಲಿ ಉತ್ತರ ಒಳನಾಡನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ IMD ತಿಳಿಸಿದೆ.