ಇಂದು ಚಿಕ್ಕಮಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ

ಚಿಕ್ಕಮಗಳೂರು, ಜ.18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು.
ಪೂರ್ವಾಹ್ನ 11ಕ್ಕೆ ಹೆಲಿಕಾಪ್ಟರ್ ಮೂಲಕ ಬೀರೂರಿಗೆ ಆಗಮಿಸುವ ಮುಖ್ಯಮಂತ್ರಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾಗುವರು.