ಇಂದು ಟಿಇಟಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಇಂದು ಟಿಇಟಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ 6-8ನೇ ತರಗತಿ ಬೋಧನೆಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಇಂದು (ನ.18) ಪ್ರಕಟವಾಗಲಿದೆ. 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ & ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಅವರು ಸಂಜೆ 5.30ಕ್ಕೆ ಕೆ.ಆರ್‌.ವೃತ್ತದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಬಳಿಕ ಅಂತಿಮಗೊಂಡ ಶಿಕ್ಷಕರ ಸ್ಥಳ ನಿಯುಕ್ತಿಗೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ.