ಇಂದು ತುಮಕೂರಿಗೆ ಪ್ರಧಾನಿ ಮೋದಿ ಆಗಮನ : ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರ ಉದ್ಘಾಟನೆ

ತುಮಕೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸಲಿದ್ದು, ತುಮಕೂರಿನ ಹೆಚ್ ಎಎಲ್ ನ ಬೃಹತ್ ಹೆಲಿಕಾಪ್ಟರ್ ತಯಾರಕಾ ಘಟಕವನ್ನು ಇಂದುಉದ್ಘಾಟಿಸಲಿದ್ದಾರೆ. ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ಎಂಬಲ್ಲಿ 615 ಎಕರೆ ಜಾಗದಲ್ಲಿ ಈ ಹೆಲಿಕಾಪ್ಟರ್ ಘಟಕ ನಿರ್ಮಾಣವಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದರ ಅಡಿಪಾಯವನ್ನು 2016 ರಲ್ಲಿ ಪ್ರಧಾನ ಮಂತ್ರಿಯವರು ಹಾಕಿದರು. ಇದು ಮೀಸಲಾದ ಹೊಸ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಯಾಗಿದ್ದು, ಇದು ಹೆಲಿಕಾಪ್ಟರ್‌ಗಳನ್ನು ನಿರ್ಮಿಸುವ ಸಾಮರ್ಥ್ಯ ಮತ್ತು ಪರಿಸರ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ.
ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯ ಇದಾಗಿದ್ದು, ಈ ಹೆಲಿಕಾಪ್ಟರ್ ಕಾರ್ಖಾನೆಯು ಆರಂಭದಲ್ಲಿ ಲಘು ಉಪಯುಕ್ತತೆ ಹೆಲಿಕಾಪ್ಟರ್‌ಗಳನ್ನು (LUH) ಉತ್ಪಾದಿಸುತ್ತದೆ. LUH ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ವರ್ಗದ ಏಕ-ಎಂಜಿನ್ ವಿವಿಧೋದ್ದೇಶ ಉಪಯುಕ್ತತೆ ಹೆಲಿಕಾಪ್ಟರ್ ಆಗಿದ್ದು, ಹೆಚ್ಚಿನ ಕುಶಲತೆಯ ವಿಶಿಷ್ಟ ಲಕ್ಷಣವಾಗಿದೆ ಎಂದು ಸರ್ಕಾರಕ್ಕೆ ಶನಿವಾರ ಮಾಹಿತಿ ನೀಡಿದೆ.
ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರ್ (LCH) ಮತ್ತು ಇಂಡಿಯನ್ ಮಲ್ಟಿರೋಲ್ ಹೆಲಿಕಾಪ್ಟರ್ (IMRH) ನಂತಹ ಇತರ ಹೆಲಿಕಾಪ್ಟರ್‌ಗಳನ್ನು ತಯಾರಿಸಲು ಕಾರ್ಖಾನೆಯನ್ನು ವಿಸ್ತರಿಸಲಾಗುವುದು ಮತ್ತು ಭವಿಷ್ಯದಲ್ಲಿ LCH, LUH, Civil ALH ಮತ್ತು IMRH ಗಳ ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆಗಾಗಿ ವಿಸ್ತರಿಸಲಾಗುವುದು. ಕಾರ್ಖಾನೆಯು ಭವಿಷ್ಯದಲ್ಲಿ ಸಿವಿಲ್ LUH ಗಳನ್ನು ರಫ್ತು ಮಾಡುವ ಸಾಮರ್ಥ್ಯವನ್ನು ಹೊಂದಿದೆ.
ಪೊಲೀಸ್ ಬಿಗಿ ಬಂದೋಬಸ್ತ್
ಪ್ರಧಾನಿ 3.30ಕ್ಕೆ ತುಮಕೂರಿನ HAL ಹೆಲಿಕಾಪ್ಟರ್ ಕಾರ್ಖಾನೆಯ ಲೋಕಾರ್ಪಣೆ ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ 1 ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 4.40ಕ್ಕೆ ಹೆಚ್ಎಎಲ್ ಹೆಲಿಪ್ಯಾಡ್ಗೆ ಆಗಮಿಸಿ, 4.45ಕ್ಕೆ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.
ಇ ಒಟ್ಟು 6 ಎಸ್ಪಿಗಳ ನೇಮಕ ಮಾಡಲಾಗಿದೆ. 19 ಡಿವೈಎಸ್ಪಿ, 119 ಸಿಪಿಐ, 239 ಪಿಎಸ್ಐ, 1202 ಎಎಸ್ಐ, ಹೆಡ್ಕಾನ್ಸ್ಟೇಬಲ್, 400 ಕಾನ್ಸ್ಟೇಬಲ್, ಹೋಮ್ಗಾರ್ಡ್, 14 ಡಿಎಆರ್ ಮತ್ತು 12 ಕೆಎಸ್ಆರ್ಪಿ ತುಕಡಿ ಹಾಗೂ ನಾಳೆ ಭದ್ರತೆಗೆ ಒಟ್ಟು 1,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಒಟ್ಟು 300 ಕ್ಕೂ ಹೆಚ್ಚು ಕೆಎಸ್ಆರ್ಟಿಸಿ ಬಸ್ಗಳನ್ನು ಬುಕ್ ಮಾಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 609 ಕೆಎಸ್ಆರ್ಟಿಸಿ ಬಸ್ಗಳಿವೆ. ಇದರಲ್ಲಿ ಸದ್ಯ 300 ಬಸ್ಗಳನ್ನು ಬುಕ್ ಮಾಡಲಾಗಿದೆ. 300 ಬಸ್ಗಳ ಬಳಕೆ ಹಿನ್ನೆಲೆ ಇಂದು ಜಿಲ್ಲಾದ್ಯಂತ ಪ್ರಯಾಣಕ್ಕೆ ಸಮಸ್ಯೆ ಎದುರಾಗಲಿದೆ.