ಇಂದು ತ್ರಿಪುರಾದಲ್ಲಿ ಚುನಾವಣೆ: ಚುನಾವಣಾ ಆಯೋಗದಿಂದ ಭರದ ಸಿದ್ಧತೆ
ಅಗರ್ತಲಾ : ಗುರುವಾರ ನಡೆಯಲಿರುವ ತ್ರಿಪುರ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ ನಡೆಸಲಾಗಿದ್ದು, ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ಪ್ರಕ್ರಿಯೆ ಖಚಿತಪಡಿಸಿಕೊಳ್ಳಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯ ಚುನಾವಣೆ ಅಧಿಕಾರಿ ಗಿಟ್ಟೆ ಕಿರಣ್ ಕುಮಾರ್ ದಿನಕರ್ ರಾವ್ ತಿಳಿಸಿದ್ದಾರೆ.
ಬೆಳಗ್ಗೆ 7 ರಿಂದ ಸಂಜೆ 4 ಗಂಟೆ ವರೆಗೆ 3,337 ಮತಕಟ್ಟೆಗಳಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಈ ಪೈಕಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ 28 ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿವೆ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಒಟ್ಟಾರೆ 259 ಅಭ್ಯರ್ಥಿಗಳ ಭವಿಷ್ಯವನ್ನು 28.13 ಲಕ್ಷ ಮತದಾರರು ಈ ಚುನಾವಣೆಯಲ್ಲಿ ನಿರ್ಧರಿಸಲಿದ್ದಾರೆ.