ಇಂದು ಬಿಡುಗಡೆಯಾಗುತ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಬೆಂಗಳೂರು: ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬುಧವಾರ ಬಿಡುಗಡೆಯಾಗಬೇಕಿತ್ತು, ಆದರೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಯುಗಾದಿ ಹಬ್ಬವಾಗಿರುವುದರಿಂದ ರಜೆಇರುವ ಕಾರಣ ನಾಳೆ ಪತ್ರಿಕೆಗಳು ಮುದ್ರಣವಾಗುವುದಿಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಬ್ಬದ ಪ್ರಯುಕ್ತ ಬೆಂಗಳೂರಿಗೆ ಬಂದಿದ್ದಾರೆ.
124 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ. ಕೆಲವು ಕ್ಷೇತ್ರಗಳಲ್ಲಿ ಹಲವು ಆಕಾಂಕ್ಷಿಗಳಿರುವ ಕಾರಣ ಪಟ್ಟಿ ಬಿಡುಗಡೆ ಕಗ್ಗಂಟಾಗಿದೆ.