ಇಂದು ಬೆಂಗಳೂರಿನಲ್ಲಿ ಬಿಜೆಪಿಯಿಂದ 'ಸಿದ್ದು ನಿಜ ಕನಸು' ಪುಸ್ತಕ ಬಿಡುಗಡೆ

ಸಿದ್ದರಾಮಯ್ಯರನ್ನು ಗುರಿಯಾಗಿಸಿ ಸಿದ್ದು ನಿಜ ಕನಸು ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದ್ದು, ಇಂದು ಬೆಂಗಳೂರಿನ ಪುರಭವನದಲ್ಲಿ ಪುಸ್ತಕ ಬಿಡಗುಡೆ ಕಾರ್ಯಕ್ರಮ ನಡೆಯಲಿದೆ. ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರು ಬಿಡುಗಡೆ ಮಾಡಲಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಹಿತ್ ಚಕ್ರತೀರ್ತ, ಸಂತೋಷ್ ತಮ್ಮಯ್ಯ ಸೇರಿದಂತೆ ಹಲವು ಬರಹಗಾರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.