ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ನಾಳೆ ಬೆಂಗಳೂರಿನಲ್ಲಿ `ಏರೋ ಇಂಡಿಯಾ-2023' ಉದ್ಘಾಟನೆ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.
ಇಂದು ರಾತ್ರಿ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ತಂಗಲಿದ್ದಾರೆ. ಫೆಬ್ರವರಿ 13 ರ ಸೋಮವಾರ ಬೆಳಗ್ಗೆ 9.30 ಕ್ಕೆ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.
ಪ್ರಧಾನಿ ಮೋದಿ ಇಂದು ರಾಜಸ್ಥಾನದ ಪ್ರವಾಸ ಮುಗಿಸಿ ಜೈಪುರ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ರಾತ್ರಿ 7.40 ಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9.30 ಕ್ಕೆ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.