ಜ. 19ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ; ಇಂದು ಮಧ್ಯಾಹ್ನ ಡಿಸಿ ಜತೆ ಆರ್.ಅಶೋಕ್ ಸಭೆ

ಕಲಬುರಗಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮತ್ತೆ ರಾಜ್ಯದಲ್ಲಿ ಕಮಲ ಅರಳಿಸುವುದಕ್ಕೆ ನಾನಾ ಕಸರತ್ತು ಮಾಡುತ್ತಿದ್ದು, ಸದ್ಯ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ಈ ಹಿನ್ನೆಲೆಯಲ್ಲಿ ಜನವರಿ 19ರಂದು ಮತ್ತೆ ಕಲಬುರಗಿ, ಯಾದಗಿರಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜನವರಿ 19ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರೋ ಕಂದಾಯ ಗ್ರಾಮದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.
ಇನ್ನು ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಕಂದಾಯ ಸಚಿವ ಆರ್.ಅಶೋಕ್ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ಮಳಖೇಡ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.