ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ

ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ

ಇಂದು ಮಧ್ಯಾಹ್ನ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಆಯೋಗವು 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಧ್ಯಂತರ ವರದಿ ಸಲ್ಲಿಸಿದೆ. ಪೂರ್ಣ ವರದಿ ಸಲ್ಲಿಸಲು ಇನ್ನೂ 15 ಜಿಲ್ಲೆಗಳಲ್ಲಿ ಅಧ್ಯಯನ ಬಾಕಿ ಇದೆ. ಹೀಗಾಗಿ ಇಂದಿನ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಂಬಂಧ ತಾತ್ಕಾಲಿಕ ಸಮಾಧಾನಪಡಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇರಿಸುವ ಸಾಧ್ಯತೆ ಇದೆ.