ಇಂದು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಎಎಪಿ ತೊರೆದು ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ, ಆಮ್ ಆದ್ಮಿ ಪಕ್ಷದ (AAP) ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ (Bhaskar Rao) ಅವರು ಇಂದು ಬಿಜೆಪಿಗೆ ಸೇರಲಿದ್ದಾರೆ.
ಮಂಗಳವಾರ ಬೆಳಗ್ಗೆ ಅವರು ಸಚಿವ ಆರ್ ಆಶೋಕ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಭಾಸ್ಕರ್ ರಾವ್ ಅವರು ಬಿಜೆಪಿ ಕಡೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ.
ಇಂದು ಬೆಳಿಗ್ಗೆ 9 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಪೊರಕೆ ಬಿಟ್ಟು, ಕಮಲವನ್ನು ಕೈ ಹಿಡಿಯಲಿದ್ದಾರೆ. ಈ ಮೂಲಕ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೇರಲಿದ್ದಾರೆ.
ಅಂದಹಾಗೇ ಭಾಸ್ಕರ್ ರಾವ್ ಅವರು ಬಸವನಗುಡಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ ರವಿ ಸುಬ್ರಮಣ್ಯ ಎಲ್. ಎ ಅವರು ಬಿಜೆಪಿಯಿಂದ ಆಯ್ಕೆಯಾಗಿದ್ದುಒಂದು ವೇಳೆ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ಸಿಗಲಿದ್ಯಾ ಎನ್ನವುದನ್ನು ಕಾದು ನೋಡಬೇಕಾಗಿದೆ.