ಇಂದು ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್' ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಇಂದು ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್' ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ತುಮಕೂರು : ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು( MLA S R Srinivas ) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಇಂದು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಜೆಡಿಎಸ್ (JDS) ಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ (SR Srinivas) ಅವರು ರಾಜೀನಾಮೆ ಸಲ್ಲಿಸಿದ್ದು, ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಗುಬ್ಬಿ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಲಿದ್ದರು. ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಕರ್ನಾಟಕ ವಿಧಾಸಭೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದರು.

ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಆ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು.

ಬಿಜೆಪಿ ಎಂಎಲ್ ಸಿ ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಗಾಳ?

ಶಿವಮೊಗ್ಗ: ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣೆ ಎದುರಿಸುವುದಕ್ಕೆ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಹೀಗಾಗಿ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಇದೀಗ ಬಿಜೆಪಿ ಎಂಎಲ್ ಸಿ ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಗಾಳ ಹಾಕಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆಯನೂರು ಮಂಜುನಾಥ್ ಜಜೆ ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೀಗ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನತ್ತ ಆಯನೂರು ಮಂಜುನಾಥ್ ಒಲವು ತೋರಿದ್ದಾರೆ. ಎನ್. ವೈ ಗೋಪಾಲಕೃಷ್ಣ ಮೂಲಕ ಆಯನೂರು ಮಂಜುನಾಥ್ ಕರೆತರಲು ಸಖತ್ ಪ್ಲ್ಯಾನ್ ನಡೆದಿದೆ.