ಇಂದು ರೈತರ ಖಾತೆಗೆ ಬೀಳಲಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣ

ಇಂದು ರೈತರ ಖಾತೆಗೆ ಬೀಳಲಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ. ಅನ್ನದಾತನನ್ನು ರಾಜನನ್ನಾಗಿ ಮಾಡಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಪೈಕಿ 2019ರ ಫೆಬ್ರವರಿಯಲ್ಲಿ ಜಾರಿ ಮಾಡಿದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು. ಇತ್ತೀಚೆಗಷ್ಟೇ ಪಿಎಂ ಕಿಸಾನ್ 12ನೇ ಕಂತಿನ ಹಣ ರೈತರ ಖಾತೆಗೆ ಬಿಡುಗಡೆ ಮಾಡಿದೆ.