ಇಂದು ವಿರಾಟ್ ಕೊಹ್ಲಿ ಯಾರೂ ಮಾಡದ ಈ ದೊಡ್ಡ ದಾಖಲೆ ಮಾಡಲಿದ್ದಾರೆ

ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ಇಂದು ಮಧ್ಯಾಹ್ನ 1:30ರಿಂದ ರಾಯ್‌ಪುರದಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಈ ಪಂದ್ಯದಲ್ಲಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಅಮೋಘ ದಾಖಲೆ ಬರೆಯುವ ಸಾಧ್ಯತೆ ಇದೆ.
ದಾಖಲೆ ನಿರ್ಮಿಸುತ್ತಾರಾ ಕಿಂಗ್ ಕೊಹ್ಲಿ?
ಇಂದುವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 111 ರನ್ ಗಳಿಸಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,000 ರನ್ ಪೂರೈಸಿದ ವಿಶ್ವದ ಮೊದಲ ಸಕ್ರಿಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಇಲ್ಲಿಯವರೆಗೆ ಈ ಶ್ರೇಷ್ಠ ದಾಖಲೆಯನ್ನು ವಿಶ್ವದ ಯಾವುದೇ ಬ್ಯಾಟ್ಸ್‌ಮನ್ ಮಾಡಲು ಸಾಧ್ಯವಾಗಿಲ್ಲ.