ಇಂದು ಶಿವರಾಮೇಗೌಡ ಬಿಜೆಪಿಗೆ

ಇಂದು ಶಿವರಾಮೇಗೌಡ ಬಿಜೆಪಿಗೆ

ಬೆಂಗಳೂರು: ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಅವರು ಭಾನುವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಈ ಮೂರು ಪಕ್ಷಗಳಲ್ಲೂ ರಾಜಕಾರಣ ಮಾಡಿರುವ ಶಿವರಾಮೇಗೌಡರು ಜೆಡಿಎಸ್‌ ಪಕ್ಷದ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ್ದರಿಂದ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು, ಹಲವು ತಿಂಗಳಿಂದ ಮಂಡ್ಯದ ನಾಗಮಂಗಲ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಈಗ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ.