ಇಂದು ಸಿಎಂ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾ ಪ್ರವಾಸ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಇಂದು ಸಿಎಂ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾ ಪ್ರವಾಸ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ತೇರಳದಾಳ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್‌ ನಲ್ಲಿ ಸಿಎಂ ಬೊಮ್ಮಾಯಿ ತೆರಳಲಿದ್ದಾರೆ.

ಬೆಳಗ್ಗೆ 11.20ಕ್ಕೆ ಬನಹಟ್ಟಿ ನಗರಕ್ಕೆ ಸಿಎಂ ಬೊಮ್ಮಾಯಿ ಆಗಮಿಸಲಿದ್ದಾರೆ. ಬಳಿಕ ನೇರವಾಗಿ ಹಿಪ್ಪರಗಿಯ ಸಂಗಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಗ್ರಾಮದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ ನೆರೆವೇರಿಸಲಿದ್ದಾರೆ.

ಬಳಿಕ ಬನಹಟ್ಟಿ ಎಸ್‌ ಬಿಎಸ್‌ ಮೈದಾನದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬನಹಟ್ಟಿಯಿಂದ ಹುಬ್ಬಳ್ಳಿಗೆ ಸಿಎಂ ಬೊಮ್ಮಾಯಿ ಹಿಂದಿರುಗಲಿದ್ದಾರೆ.