ಇಂದು ಸುಪ್ರೀಂನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ

ಇಂದು ಸುಪ್ರೀಂನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಸಾಕ್ಷ್ಯಚಿತ್ರವು 2022 ರ ಗುಜರಾತ್ ಗಲಭೆಗಳನ್ನು ಆಧರಿಸಿದೆ.

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಹಿರಿಯ ಪತ್ರಕರ್ತ ಎನ್ ರಾಮ್ ಮತ್ತು ವಕೀಲ-ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ನಿರ್ಧಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಶೀಘ್ರದಲ್ಲೇ ಈ ಅರ್ಜಿ ವಿಚಾರಣೆ ಆಗಬೇಕೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮುಂದೆ ಜನವರಿ 30ರಂದು ಮನವಿ ಮಾಡಲಾಗಿತ್ತು. ಅದರಂತೆಯೇ ಇಂದಿನಿಂದ ಈ ಅರ್ಜಿಗಳ ವಿಚಾರಣೆ ನಡೆಯಲಿದೆ.