ಇಂದು ಹುಬ್ಬಳ್ಳಿಗೆ ಬಿಜೆಪಿ ಚಾಣಕ್ಯ 'ಅಮಿತ್ ಶಾ' ಆಗಮನ : ನಾಳೆ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗಿ

ಇಂದು ಹುಬ್ಬಳ್ಳಿಗೆ ಬಿಜೆಪಿ ಚಾಣಕ್ಯ 'ಅಮಿತ್ ಶಾ' ಆಗಮನ : ನಾಳೆ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗಿ

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇಂದು ರಾತ್ರಿ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ ನಾಳೆ ಜನವರಿ 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿನ ಡೆನಿಸತ್ ಹೋಟೆಲ್ ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಲಿದ್ದು, ಜನವರಿ 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಜ.28ರಂದು ಬೆಳಿಗ್ಗೆ ಹುಬ್ಬಳ್ಳಿಯ ಕೆಎಲ್‌ಇ ಸೊಸೈಟಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಳಾಂಗಣ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ಕಾಲೇಜಿನ ಮೈದಾನದಲ್ಲಿ ಕೆಎಲ್‌ಇ ಸೊಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. . ಬಳಿಕ ಧಾರವಾಡದ ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ ಸೆಂಟರ್ನ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ . ಆಯಾ ಜಿಲ್ಲೆಗಳಲ್ಲಿ ಚುನಾವಣೆಗೆ ಸಂಬಂಧಿಸಿ ಮುಂದಿನ ಕಾರ್ಯತಂತ್ರ ಸೇರಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.