ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣದ ಮುಖ್ಯಾಂಶಗಳು ಇಲ್ಲಿವೆ
ಬೆಂಗಳೂರು: ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಇಂಧನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ್ದಾನೆ. ನಂತರ ಮಾತನಾಡಿದ ಅವರು, ಟರ್ಕಿ ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಇನ್ನು ಭಾರತ ಅಭಿವೃದ್ಧಿ ಸಂಕಲ್ಪದಲ್ಲಿ ನಡೆಯುತ್ತಿದೆ. ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶ ಸಿಕ್ಕಿದೆ. ಐಎಂ ಎಫ್ 2023 ಅಭಿವೃದ್ಧಿ ದರ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಅತೀವೇಗದಲ್ಲಿ ಆರ್ಥಿಕತೆ ಅಭಿವೃದ್ಧಿಯಾಗುತ್ತಿದೆ. ಮಹಾಮಾರಿ ಕೊರೋನಾ ಹಾಗೂ ಯದ್ಧದ ಬಳಕವೂ ಜಾಗತಿಕ ಗಮನ ಸೆಳೆದಿದೆ. 2022ರಲ್ಲಿ ಜಗತ್ತಿಗೆ ಏನೇ ಸಮಸ್ಯೆ ಇದ್ರೂ ಪಾರಾಗಿದ್ದೇವೆ ಎಂದರು.
ಭಾರತದ ಅಭಿವೃದ್ಧಿಯಲ್ಲಿ ಭಾರಿ ಬದಲಾವಣೆ ಆಗಿದೆ. ಈ ಪ್ರಮಾಣ ಮುಂದುವರಿದ ದೇಶಗಳ ಜನಸಂಖ್ಯೆಗಿಂತ ಹೆಚ್ಚಿದೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಇಂಟರ್ ನೆಟ್ ಬಳಕೆ ಹೆಚ್ಚಳವಾಗಿದೆ. ಶೇ. 13ರಷ್ಟು ಇಂಟರ್ ನೆಟ್ ಬಳಕೆದಾರರ ಸಂಖ್ಯೆ ಹೆಚ್ಚಳವಾಗಿದೆ. ಗ್ರಾಮೀಣ ದೇಶದಲ್ಲೇ ಇಂಟರ್ ನೆಟ್ ಬಳಕೆ ಹೆಚ್ಚಿದೆ.ಶ್ರೀಸಾಮಾನ್ಯರು , ಮಧ್ಯಮ ವರ್ಗದ ಜನರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಒನ್ ನೇಷನ್, ಒನ್ ಗ್ರಿಡ್ ಯೋಜನೆಗೆ ಮತ್ತಷ್ಟು ವೇಗ ನೀಡಲಾಗಿದೆ. ಮುಂದಿನ 4-5 ವರ್ಷಗಳಲ್ಲಿ ಗ್ಯಾಸ್ ಪೈಪ್ ಲೈನ್ ಸಂಪರ್ಕದ ಗುರಿ ಹೊಂದಿದೆ. ಸಿಎನ್ ಜಿ ಸ್ಟೇಷನ್ ಗಳು 900 ಸಮೀಪ ಇದ್ದವು. ಈಗ ಐದು ಸಾವಿರದವರೆಗೆ ಸಿಎನ್ ಜಿ ಸ್ಟೇಷನ್ ಗಳಿವೆ. 2014ರಲ್ಲಿ 14 ಸಾವಿರ ಕಿ.ಮೀ ಗ್ಯಾಸ್ ಪೈಪ್ ಲೈನ್ ಇತ್ತು. ಇದೀಗ 22 ಸಾವಿರಕ್ಕೂ ಹೆಚ್ಚು ಕಿ.ಮೀ ಗ್ಯಾಸ್ ಪೈಪ್ ಲೈನ್ ಹೆಚ್ಚಿಸಲಾಗಿದೆ. ನಾಲ್ಕೈದು ವರ್ಷಗಳಲ್ಲಿ ೩೫ ಸಾವಿರ ಕಿಮೀಗೆ ಹೆಚ್ಚಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಅಳವಡಿಕೆಯಲ್ಲಿ ವೇಗದ ಕೆಲಸ ನಡೆಯುತ್ತಿದೆ. ಎಂದರು.
ಇ-20 ಗುರಿಗಳನ್ನು ಇಂದು ಪರಿಚಯಿಸಲಾಗುತ್ತಿದೆ. ಆರಂಭದಲ್ಲಿ ಇದು ಕೆಲವೇ ನಗರಗಳಲ್ಲಿ ಮಾತ್ರವೇ ಇರುತ್ತದೆ. ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ಇದನ್ನು ವಿಸ್ತರಿಸಲಾಗುತ್ತದೆ. ವಿದ್ಯುತ್ ಉತ್ಪಾದನೆ, ವಿತರಣೆ, ಬಳಕೆಯಲ್ಲಿ ಉಳಿತಾಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ನವೀಕರಿಸಬಹುದಾದ ಇಂಧನ ಮೂಲಗಳಿಗೆ ಆದ್ಯತೆ ಸಿಗಲಿದೆ. ಸೋಲಾರ್ ಶಕ್ತಿಯಿಂದ ಮನೆ, ಗ್ರಾಮ, ಏರ್ಪೋರ್ಟ್, ಕೃಷಿ ಮುನ್ನಡೆಯುತ್ತಿರುವ ಹಲವು ಉದಾಹರಣೆಗಳಿವೆ ಎಂದಿದ್ದಾರೆ.
ಭಾರತದಲ್ಲಿ ಸೌರಶಕ್ತಿ ಉತ್ಪಾದನೆ ಶೇ 20ರಷ್ಟು ಹೆಚ್ಚಾಗಿದೆ. ಪವನ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ. ಈ ದಶಕದ ಅಂತ್ಯದಲ್ಲಿ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಅರ್ಧದಷ್ಟನ್ನು ಪರಿಸರಸ್ನೇಹಿ ಮೂಲಗಳಿಂದಲೂ ಉತ್ಪಾದಿಸುವ ಗುರಿ ಇರಿಸಿಕೊಂಡಿದ್ದೇವೆ. ಇವಿ ಬ್ಯಾಟರಿಗಳ ದರ ಕಡಿಮೆ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ. 50 ಗಿಗಾವ್ಯಾಟ್ಗಳಷ್ಟು ಸಾಮರ್ಥ್ಯದ ಅತ್ಯಾಧುನಿಕ ಕೆಮಿಸ್ಟ್ರಿ ಸೆಲ್ ತಯಾರಿಕೆಗಾಗಿ ವಿಶೇಷ ಪ್ರೋತ್ಸಾಹ ನೀಡಿದ್ದೇವೆ. ದೇಶದಲ್ಲಿ ಬ್ಯಾಟರಿ ಉತ್ಪಾದನೆಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
ಇನ್ನು ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ ಸ್ತಂಭಗಳಿವೆ.
ದೇಶೀಯ ಉತ್ಪಾದನೆಯ ಹೆಚ್ಚಳ.
ಪೂರೈಕೆಯಲ್ಲಿ ವೈವಿಧ್ಯ.
ಜೈವಿಕ ಇಂಧನ, ಸೋಲಾರ್ನಂಥ ಪರ್ಯಾಯ ಇಂಧನ ಬಳಕೆಯಲ್ಲಿ ವೃದ್ಧಿ.
ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ