ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ

ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ

ವದೆಹಲಿ: ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟ ಮಾಡಲಿದ್ದಾರೆ. ಈ ನಡುವೆ ಅವರು ಮಾತನಾಡುತ್ತ 224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ.

ಒಟ್ಟಾರೆ ರಾಜ್ಯದಲ್ಲಿ 5,21,76,579 ಕೋಟಿ ಮತದಾರರಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,599 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ - 2,62,42,561 ಹಾಗೂ ಮಹಿಳಾ ಮತದಾರರ ಸಂಖ್ಯೆ 2,59,26,319 ಇದೆ. ರಾಜ್ಯದಲ್ಲಿ ಅಂದಾಜು 42,756 ತೃತೀಯ ಲಿಂಗಿಗಳಿದ್ದು, ಇವರಲ್ಲಿ 41,312 ಮಂದಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ (18+) - 9,17,241ಇದೆ ಒಟ್ಟು ಮತಗಟ್ಟೆಗಳು -58,282 ಇವೆ ಈ ಪೈಕಿ ನಗರ ಪ್ರದೇಶದಲ್ಲಿ 24,063 ಇವೆ. ಮಹಿಳೆಯರಿಂದ ನಿರ್ವಹಣೆ ಮಾಡುವ ಮತಗಟ್ಟೆಗಳ ಸಂಖ್ಯೆ 1320 ಹಾಗೂ ಗ್ರಾಮೀಣ ಭಾಗದಲ್ಲಿ ಇರುವ ಮತಗಟ್ಟೆಗಳು 34,219 ಹಾಗೂ ಮಾದರಿ ಮತಗಟ್ಟೆಗಳ ಸಂಖ್ಯೆ 240 ಇವೆ.

ಇದೇ ಮೊದಲ ಬಾರಿಗೆ 80 ವರ್ಷ ಅದಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. . ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯ ಒದಗಿಸಲಾಗುವುದು. ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ. 5.55 ಲಕ್ಷ ಅಂಗವಿಕಲರಿದ್ದು, ಈ ಪೈಕಿ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವರಿಗೆ ಆಯೋಗ ಸೌಲಭ್ಯ ಕಲ್ಪಿಸಲಿದೆ ಅಂತ ತಿಳಿಸದರು.

ಕರ್ನಾಟಕದ ಚುನಾವಣೆಯಲ್ಲಿ ಮೊದಲ ಬಾರಿಗೆ ಭಾಗವಹಿಸುವ ಮತದಾರರು 9.17 ಲಕ್ಷಕ್ಕೂ ಹೆಚ್ಚು . ಅಲ್ಲದೆ ಮುಂಗಡ ಅರ್ಜಿ ಸೌಲಭ್ಯದ ಅಡಿಯಲ್ಲಿ, 17 ವರ್ಷ+ ಯುವಕರಿಂದ 1.25 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ, ಇದರಲ್ಲಿ ಏಪ್ರಿಲ್ 1, 2023 ರ ವೇಳೆಗೆ 18 ವರ್ಷ ತುಂಬುವ ಯುವಕರಿಂದ ಸುಮಾರು 41,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ.