ಇನ್ ಸ್ಪೆಕ್ಟರ್ ನಂದೀಶ್ ಪ್ರಕರಣದ ತನಿಖೆಗೆ ಸೂಚನೆ: ಸಿಎಂ ಬೊಮ್ಮಾಯಿ

ಇನ್ ಸ್ಪೆಕ್ಟರ್ ನಂದೀಶ್ ಪ್ರಕರಣದ ತನಿಖೆಗೆ ಸೂಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಅ.30: ಇನ್ ಸ್ಪೆಕ್ಟರ್ ನಂದೀಶ್ ಮೃತ್ಯು ಪ್ರಕರಣದ ಬಗ್ಗೆ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದ್ದು, ಎಲ್ಲಾ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಈ ವಿಚಾರದಲ್ಲಿ ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಮುಖ್ಯಮಂತ್ರಿ ನುಡಿದರು.

ಬಿಜೆಪಿಗೆ ಒಬಿಸಿ ಬೆಂಬಲದ ದ್ಯೋತಕವಾಗಿ ಸಮಾವೇಶ

ಒಬಿಸಿ ದೊಡ್ಡ ಪ್ರಮಾಣದ ಬೆಂಬಲ ಬಿಜೆಪಿಗೆ ದೊರೆಯುತ್ತಿರುವ ದ್ಯೋತಕವಾಗಿ ಈ ಕಲಬುರಗಿಯಲ್ಲಿ ಸಮಾವೇಶ ಆಯೋಜನೆಗೊಂಡಿದೆ ಎಂದರು.

ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶವಿದೆ. ನಂತರ ಪರಿಶಿಷ್ಟ ಜಾತಿಗಳ ಸಮಾವೇಶ ನಡೆಯಲಿದೆ. ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದ್ದು, ಡಿಸೆಂಬರ್ ತಿಂಗಳಲ್ಲಿ ಮಹಿಳೆಯರ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಪಕ್ಷದ ಅಧ್ಯಕ್ಷರು, ಕೋರ್ ಸಮಿತಿ ತೀರ್ಮಾನ ಮಾಡಿದೆ. ಆ ಪ್ರಕಾರ ಇಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಸುಮಾರು 2 ಲಕ್ಷ ಜನ ಸೇರಲಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಸೇರುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.