ಇನ್ನೂ ಬಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌: ಸಮ್ಮೇಳನ ಉದ್ಘಾಟನೆ ವಿಳಂಬ

ಇನ್ನೂ ಬಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌: ಸಮ್ಮೇಳನ ಉದ್ಘಾಟನೆ ವಿಳಂಬ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ನಿಗದಿತ ಸಮಯಕ್ಕೆ ಬಾರದಿದ್ದರಿಂದ, ಸಮ್ಮೇಳನ‌ ಉದ್ಘಾಟನೆ ವಿಳಂಬವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ನಿಗದಿಯಾಗಿರುವಂತೆ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಉದ್ಘಾಟನೆಯಾಗಬೇಕಿತ್ತು.

ಬೊಮ್ಮಾಯಿ‌ ಅವರು ಬೆಂಗಳೂರಿನಿಂದ‌ ಹೆಲಿಕಾಪ್ಟರ್ ನಲ್ಲಿ ಬರುವ ಹಿನ್ನೆಲೆಯಲ್ಲಿ, ನಗರದ ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ.

ಸಿ.ಎಂ. ಗಾಗಿ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಕಾಯುತ್ತಿದ್ದಾರೆ.

ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಉದ್ಘಾಟನೆಯ ಆಗಬೇಕಿತ್ತು. ಈಗಾಗಲೇ 50 ನಿಮಿಷ ವಿಳಂಬವಾಗಿದೆ. ಅದಕ್ಕಾಗಿ, ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಯನ್ನು ಬೇಗ ಮುಗಿಸಿದ್ದೇವೆ. 11.30ಕ್ಕೆ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಎಲ್ಲರೂ ಕಾಯುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಹೆಲಿಪ್ಯಾಡ್ ಗೆ ಬಂದಿಳಿದ ಸಿ‌.ಎಂ
ಹಾವೇರಿ: 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಶಾಸಕ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ನಗರದ ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಮೈದಾನದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಬೆಳಿಗ್ಗೆ 11.15ಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ, ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಶಿವರಾಮ ಹೆಬ್ಬಾರ್ ಹಾಗೂ ಇತರರು ಮುಖ್ಯಮಂತ್ರಿಯನ್ನು ಸ್ವಾಗತಿಸಿದರು.

ಉದ್ಘಾಟನೆಗೆ ಕ್ಷಣಗಣನೆ
ಹಾವೇರಿ: ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.

ಕನಕ-ಷರೀಫ-ಸರ್ವಜ್ಞ ಪ್ರಧಾನ ವೇದಿಕೆ ಎದುರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರ ನಿರೀಕ್ಷೆಯಲ್ಲಿ ಜನ ಇದ್ದಾರೆ.

ಈಗಾಗಲೇ ಕಲಾ ತಂಡಗಳ ಮೆರವಣಿಗೆ ಪ್ರಧಾನ ಕಾರ್ಯಕ್ರಮ ನಡೆಯಲಿರುವ ಸ್ಥಳ ತಲುಪಿವೆ. ಭೋಜನ ಶಾಲೆ, ವಿವಿಧ ವಸ್ತು ಪ್ರದರ್ಶನಗಳ ಮಳಿಗೆ ಎದುರು ಜನ ಸೇರಿದ್ದಾರೆ.