ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಮಳೆ

ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಮಳೆ

ಬೆಂಗಳೂರು:ಗುರುವಾರದಂದು ಸಹ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಈಗಾಗಲೇ ಚಳಿಯಿಂದ ತತ್ತರಿಸುತ್ತಿರುವ ಜನತೆಗೆ ಮಳೆರಾಯ ಮತ್ತಷ್ಟು ಹೈರಾಣಾಗಿಸಿದ್ದಾನೆ.ಈ ಹಿನ್ನೆಲೆಯಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಬೆಂಗಳೂರು, ಹಳೆ ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.