ಇನ್ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ `ಕೆ-ಸೆಟ್' ಪರೀಕ್ಷೆ : ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು : ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) ನಿರ್ವಹಣೆ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಧಾನಪರಿಷತ್ ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಮಧು ಜಿ.ಮಾದೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಸಿ.ಎನ್.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ಕೆಇಎ ಇಡೀ ದೇಶಕ್ಕೆ ಮಾದರಿಯಾಗಿದೆ. ಜೊತೆಗೆ ಯುಜಿಸಿ ಅನುಮತಿ ಪಡೆದುಕೊಂಡು ಕೆ-ಸೆಟ್ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.