ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್

ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ.. . ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್‌ಗಳು ದಾಖಲಾಗುತ್ತಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. ನಿಯಮ ಉಲ್ಲಂಘನೆ ಮಾಡೋದನ್ನು ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಈ ಮಾಸ್ಟರ್ ಪ್ಲ್ಯಾನ್‌ಗೆ ಮುಂದಾಗಿರುವುದಾಗಿ ವರದಿಯಾಗಿದೆ.