ಇಬ್ಬರ ಜಗಳದಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ:ಡಿ.ಕೆ.ರವಿ ತಾಯಿ ಗೌರಮ್ಮ ಕಣ್ಣೀರು

ರಾಮನಗರ: IPS ಅಧಿಕಾರಿ ಡಿ ರೂಪಾ ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ವಾರ್ ತಾರಕಕ್ಕೇರಿದೆ. ಈ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಇಬ್ಬರ ಜಗಳದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಹೆಸರು ಎಳೆದು ತರಬೇಡಿ.ಈ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ನಿಮ್ಮ ಗಲಾಟೆ ವಿಚಾರದಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ ಎಂದು ಹೇಳಿದ್ದಾರೆ.
ಎಂದು ಕಣ್ಣೀರಿಟ್ಟಿದ್ದಾರೆ. 8 ವರ್ಷವಾಯ್ತು ನನ್ನನ್ನು ನೋಡಲು ಯಾರೂ ಬಂದಿಲ್ಲ.
ಡಿ.ಕೆ.ರವಿಯನ್ನು ನಾನು ಸಾಕಿ ಬೆಳೆಸಿದ್ದೇನೆ. ಡಿ.ಕೆ.ರವಿ ಜತೆ ಕುಸುಮಾ 5 ವರ್ಷ ಅಷ್ಟೆ ಸಂಸಾರ ಮಾಡಿದ್ದಾರೆ. ನನ್ನ ಮಗ ಇರುವವರೆಗೂ ಮಾತ್ರ ಆಕೆ ಸೊಸೆ. ಹೀಗಾಗಿ ನೀವ್ಯಾರೂ ನನ್ನ ಮಗನ ಹೆಸರನ್ನು ತರಬೇಡಿ ಎಂದು ಮನವಿ ಮಾಡಿದ್ದಾರೆ.