ಇಬ್ಬರು ನಾಯಕಿಯರೊಂದಿಗೆ ಬುಲೆಟ್ ಹತ್ತಿ ಹೊರಟ ಧರ್ಮ .

ಬೆಂಗಳೂರು: 'ಬೆಂಗಳೂರು ಇನ್', 'ದಿ ವೈರಸ್', 'ವಸುಂಧರಾ ದೇವಿ' ಮುಂತಾದ ಚಿತ್ರಗಳಲ್ಲಿ ನಟಿಸುತ್ತಿರುವ ಧರ್ಮ ಕೀರ್ತಿರಾಜ್, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅದೇ 'ಬುಲೆಟ್'. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಆರ್.ಟಿ. ನಗರದ ವಿನಾಯಕ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದೆ.
ಈ ಚಿತ್ರವನ್ನು ಸತ್ಯಜಿತ್ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಕುರಿತು ಮಾಹಿತರಿ ನೀಡುವ ಅವರು, 'ಬೆಂಗಳೂರು, ಗೋವಾ, ಮಂಗಳೂರು ಮುಂತಾದ ಕಡೆ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಧರ್ಮ ಕೀರ್ತಿರಾಜ್ಗೆ ನಾಯಕಿಯರಾಗಿ ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ಇದ್ದಾರೆ. ಶ್ರೀಯಾ ಅವರು ಸುಶಾಂತ್ ಸಿಂಗ್ ಅವರ ಬಯೋಪಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಅಜಿತಾ ವೆಬ್ ಸೀರಿಸ್ಗಳಲ್ಲಿ ನಟಿಸಿದ್ದಾರೆ. ಇದೊಂದು ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ಫ್ಯಾಮಿಲಿ ಸೆಂಟಿಮೆಂಟ್ ಸಹ ಇದೆ' ಎಂದು ಮಾಹಿತಿ ನೀಡುತ್ತಾರೆ.
ಕಥೆ ಬಹಳ ಚೆನ್ನಾಗಿದೆ ಎನ್ನುವ ಧರ್ಮ, 'ಅಪ್ಪ-ಮಗನ ಸೆಂಟಿಮೆಂಟ್ ಸನ್ನಿವೇಶಗಳು ಜನರಿಗೆ ಹತ್ತಿರವಾಗಲಿದೆ. ನನ್ನ ತಂದೆಯ ಪಾತ್ರದಲ್ಲಿ ಸತ್ಯಜಿತ್ ಅವrE ಅಭಿನಯಿಸುತ್ತಿದ್ದಾರೆ. ಎರಡು ಶೇಡ್ಗಳಲ್ಲಿ ನನ್ನ ಪಾತ್ರವಿರುತ್ತದೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ' ಎಂದರು ನಾಯಕ ಧರ್ಮ ಕೀರ್ತಿರಾಜ್.ನಾಯಕಿಯರಾದ ಶ್ರೀಯಾ ಶುಕ್ಲ ಹಾಗೂ ಅಜಿತಾ ಜಾಗೆ ಕನ್ನಡದಲ್ಲಿ ನಟಿಸುತ್ತಿರುವ ಖುಷಿ ಇದೆಯಂತೆ. ಚಿತ್ರಕ್ಕೆ ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ ಮತ್ತು ರಾಜ್ ಭಾಸ್ಕರ್ ಅವರ ಸಂಗೀತವಿದೆ.