ಇಷ್ಟು ದಿನವಾದರೂ 'ಸ್ಯಾಂಟ್ರೋ ರವಿ' ಬಂಧನವಾಗಿಲ್ಲ : ಬಿಜೆಪಿ ವಿರುದ್ಧ ಸರಣಿ ಟ್ವೀಟ್ ನಲ್ಲಿ ದಿನೇಶ್ ಗುಂಡೂರಾವ್ ವಾಗ್ಧಾಳಿ
ಬೆಂಗಳೂರು : ಸ್ಯಾಂಟ್ರೋ ರವಿ ವಿರುದ್ಧ FIR ದಾಖಲಾಗಿ ಹತ್ತು ದಿನಗಳಾಗಿವೆ. ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ BJPಯವರಿಗೆ ಅವನು ಸಲ್ಲಿಸಿದ 'ಸೇವೆ'ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ?
ಸ್ಯಾಂಟ್ರೋ ರವಿಯಂತಹ ಪಿಂಪ್ BJP ಕಾರ್ಯಕರ್ತ, ಮತ್ತೊಂದು ಕಡೆ ನಟೋರಿಯಸ್ ರೌಡಿ ಶೀಟರ್ಗಳನ್ನು, ಪೋಲಿ ಪುಡಾರಿಗಳನ್ನು BJPಯವರೇ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಬಿಜೆಪಿಯವರು ನೈತಿಕತೆಯ ಬಗ್ಗೆ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ. BJPಗೆ ಜನ 'ಬ್ಲ್ಯೂ'ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.