ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಎರಡು ಕ್ಷೇತ್ರದಿಂದಲ್ಲ, ಒಂದೇ ಕ್ಷೇತ್ರದಿಂದ ಕಣಕ್ಕಿಳಿಯುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಕೋಲಾರ, ಬಾದಾಮಿ ಹಾಗೂ ವರುಣಾ ಕ್ಷೇತ್ರವನ್ನು ಅಂತಿಮವಾಗಿ ಆಯ್ಕೆ ಮಾಡಿದ್ದೇನೆ. ಹೈಕಮಾಂಡ್ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.ಇನ್ನು ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪದ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತಿರುವಾಗಿಯೇ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಇರುತ್ತಾರೆಂಬ ಕಾರಣಕ್ಕಾಗಿ ಅವರ ಮಾಹಿತಿಯನ್ನೇ ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಆರೋಪಿಸಿದ್ದಾರೆ.