ಈ ಬಾರಿ ಚುನಾವಣೆಗೆ ನಾನು ಸ್ಪರ್ಧೇ ಮಾಡುತ್ತೇನೆ: ಜಗದೀಶ್ ಶೆಟ್ಟರ್

ಕೊಪ್ಪಳ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ.ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ರಾಜಕೀಯ ನಾಯಕರ ಪ್ರಚಾರ ಭರಾಟೆ ಜೋರಾಗಿದೆ.
ರಾಜ್ಯದಲ್ಲಿ ಬಿಜೆಪಿ ತರಲು ನಾಯಕರು ಬಹಳ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ಕೇಂದ್ರ ನಾಯಕರು ಆಗಾಗ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಇದೀಗ ಈ ಬಾರಿ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೇ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಹಿರಿತಯರಿಗೆ ಟಿಕೆಟ್ ಇಲ್ಲ ಅನ್ನೋದು ಊಹಾಪೋಹವಾಗಿದೆ. ಗುರಾತ್ ಮಾದರಿಯಲ್ಲಿ ಎಲ್ಲಿದೆ, ಯಾರು ಹೇಳಿದ್ದಾರೆ ಎಂದು ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.ಈ ಬಾರಿಯೂ ಲಿಂಗಾಯುತ ಸಮುದಾಯಕ್ಕೆ ಬಿಜೆಪಿ ಬೆಂಬಲಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.