ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಈ ಬಾರಿ ಸರಳ ಪ್ರಶ್ನೆಗಳ ಹೊಸ ಮಾದರಿ ಪ್ರಶ್ನೆ ಪತ್ರಿಕೆ

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಈ ಬಾರಿ ಸರಳ ಪ್ರಶ್ನೆಗಳ ಹೊಸ ಮಾದರಿ ಪ್ರಶ್ನೆ ಪತ್ರಿಕೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ಈ ವರ್ಷದಿಂದ ಹೊಸ ಮಾದರಿ ಪ್ರಶ್ನೆ ಪತ್ರಿಕೆ ರೂಪಿಸಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮಗೊಳಿಸಲು ಮಹತ್ವದ ಬದಲಾವಣೆ ಮಾಡಲಾಗಿದ್ದು, ಸರಳ ಪ್ರಶ್ನೆ ಹೆಚ್ಚಿಸಲಾಗಿದ್ದು, ಕಠಿಣ ಪ್ರಶ್ನೆ ಪ್ರಮಾಣ ಕಡಿಮೆ ಮಾಡಲಾಗಿದೆ.

ಎಲ್ಲ ವಿಷಯಗಳಲ್ಲಿಯೂ ಒಂದು ಅಂಕದ ಪ್ರಶ್ನೆಗಳನ್ನು 20ಕ್ಕೆ ಹೆಚ್ಚಿಸಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಎರಡು, ಮೂರು, ನಾಲ್ಕು, ಐದು ಮತ್ತು ಆರು ಅಂಕಗಳ ಪ್ರಶ್ನೆಗಳ ಸಂಖ್ಯೆಯನ್ನು ಹೆಚ್ಚು ಕಡಿಮೆ ಮಾಡಲಾಗಿದ್ದು, ಪ್ರಶ್ನೆ ಜೊತೆಗೆ ಬಹು ಆಯ್ಕೆ ಉತ್ತರ ನೀಡಿ ಪ್ರಶ್ನೆ ಪತ್ರಿಕೆ ರೂಪಿಸಲಾಗಿದೆ. ಸುಲಭ ಪ್ರಶ್ನೆಗಳನ್ನು 40ಕ್ಕೆ ಹೆಚ್ಚಳ ಮಾಡಲಾಗಿದೆ. ಬಿಟ್ಟ ಸ್ಥಳ ಭರ್ತಿ ಮಾಡುವುದು, ಹೊಂದಿಸಿ ಬರೆಯುವುದು, ಬಹು ಆಯ್ಕೆ ಉತ್ತರದ ಪ್ರಶ್ನೆಗಳು ಇರುತ್ತವೆ.

ಈಗಾಗಲೇ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯನ್ನು ಅಂತಿಮಗೊಳಿಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿ ಪತ್ರಿಕೆಗಳ ಮಾದರಿಯನ್ನು ಕೂಡ ಪ್ರಕಟಿಸಲಾಗುತ್ತದೆ. ದ್ವಿತಿಯ ಫಲಿತಾಂಶ ಹೆಚ್ಚಳ ದೃಷ್ಟಿಯಿಂದ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.