ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ: ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಿನ್ನೆಲೆ ಮಲ್ಲೇಶ್ವರಂ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿ. ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ನಾಲ್ಕು ತಂಡದಿಂದ ವಿಜಯಯಾತ್ರೆ ಮಾಡಿದ್ದೇವೆ. ವಿಜಯ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜನರು ಇಂದು ಪ್ರಧಾನಿ ಮೋದಿ, ಬಿಜೆಪಿ ಪರ ಇದ್ದಾರೆ. ನಾವು ನಡೆಸುತ್ತಿರುವ ವಿಜಯಯಾತ್ರೆಯಿಂದ ಕಾಂಗ್ರೆಸ್ ಗೆ ಭಯ ಶುರುವಾಗಿದೆ ಆದರೆ ಈ ಬಾರಿ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ ಮಾಡುತ್ತೇವೆ. ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಗೆಲುವಿಗೆ ಕೆಲಸ ಮಾಡಬೇಕು. ರಾಜ್ಯದಲ್ಲಿ ಸಾಮಾಜಿಕ ನ್ಯಾಯದಡಿ ಮೀಸಲಾತಿ ಮಾಡಲಾಗಿದೆ. ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುತ್ತೇನೆ. ಭೂ ರಹಿತ ದಲಿತ ಸಮುದಾಯಕ್ಕೆ ಭೂಮಿ ವಿತರಿಸಿದ್ದೇವೆ ಎಂದರು.
ಇನ್ನು ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇನ್ನೇನು ಶೀಫ್ರದಲ್ಲೇ ಬಿಜೆಪಿ ಅಭ್ಯರ್ಥಿ ಪಟ್ಟಿಯನ್ನು ಘೋಷಣೆ ಮಾಡುತ್ತೇವೆ. ಸದ್ಯದಲ್ಲೇ ಅಭ್ಯರ್ಥಿಗಳ ಯಾರೆಂದು ವರಿಷ್ಠರು ಹೇಳುತ್ತಾರೆ.ಹಿಂದೆ ನಾನು 25 ಸಂಸದರು ಗೆಲ್ಲುತ್ತೇವೆ ಎಂದು ಹೇಳಿದ್ದು ಸುಳ್ಳಾಗಲಿಲ್ಲ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ .
ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕ ಇಲ್ಲ. ಪ್ರಧಾನಮಂತ್ರಿ ಮೋದಿ, ಅಮಿತ್ ಶಾ ಅವರಿಗೆ ಜನಬೆಂಬಲ ಸಿಗುತ್ತಿದೆ. ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ವೇಳೆ 2 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಬಿಜೆಪಿಯ ಜನಬೆಂಬಲ ನೋಡಿ ಕಾಂಗ್ರೆಸ್ನವರು ದಿಗ್ಭ್ರಾಂತರಾಗಿದ್ದಾರೆ. ಸಿಎಂ ಬೊಮ್ಮಾಯಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿದ್ದಾರೆ. ರಾಜ್ಯದ ಜನರಿಗಾಗಿ ನಾನು ಹಲವು ಕಾರ್ಯಕ್ರಮ ಜಾರಿಗೆ ತಂದಿದ್ದೇನೆ. ಎರಡು-ಮೂರು ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಆರಂಭವಾಗುತ್ತೆ ಎಂದರು ಹೇಳಿದ್ದಾರೆ.