ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಈ ಬಾರಿಯ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ನ್ಯಾಯ

ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಈ ಬಾರಿಯ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ನ್ಯಾಯ

ಮೈಸೂರು : ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ.

ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸುತ್ತೇವೆ. ಜನಪರವಾಗಿ ಎಲ್ಲಾ ವರ್ಗದದ ಜನರಿಗೂ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.