ಈ ಮೂವರು ಕ್ರಿಕೆಟಿಗರಿಗೆ ಶ್ರೀಲಂಕಾ ವಿರುದ್ಧದ ಸರಣಿ ಅಗ್ನಿಪರೀಕ್ಷೆ!

2023ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಏಕದಿನ ಸರಣಿಯಲ್ಲಿ ಪ್ರಮುಖ ಆಟಗಾರರು ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತೆ ತಂಡಕ್ಕೆ ಸೇರಿಕೊಂಡಿದ್ದಾರೆ.
ಜನವರಿ 10 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಗುವಾಹಟಿಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಕೋಲ್ಕತ್ತಾ ಮತ್ತು ತಿರುವನಂತಪುರಂನಲ್ಲಿ ಎರಡು ಮತ್ತು ಮೂರನೇ ಏಕದಿನ ಪಂದ್ಯ ನಡೆಯಲಿದೆ. ಭಾರತ ತಂಡದ ಆಯ್ಕೆಯು ಈಗಾಗಲೇ ಸಾಕಷ್ಟು ಟೀಕೆಗೆ ಒಳಗಾಗಿದೆ, ವಜಾಗೊಂಡಿರುವ ಆಯ್ಕೆ ಸಮಿತಿಯು ತಮ್ಮ ಆಲೋಚನೆಗಳನ್ನು ವಿವರಿಸಲು ಇನ್ನೂ ಪತ್ರಿಕಾಗೋಷ್ಠಿಯನ್ನು ನಡೆಸಬೇಕಿದೆ.