ಈ ವರ್ಷದ ನವೆಂಬರ್-ಡಿಸೆಂಬರ್ ಗೆ ಮಂಡ್ಯದಲ್ಲಿ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ'!

ಈ ವರ್ಷದ ನವೆಂಬರ್-ಡಿಸೆಂಬರ್ ಗೆ ಮಂಡ್ಯದಲ್ಲಿ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ'!

ಮಂಡ್ಯ : ಈ ವರ್ಷದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನವೆಂಬರ್-ಡಿಸೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ. ರವಿಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮ್ಮೇಳನ ನಡೆಸಲು ಕಸಾಪ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳ ನಡೆಸುವುದು ಮಂಡ್ಯ ಜಿಲ್ಲೆಯ ಕನಸಾಗಿತ್ತು. ಸಮ್ಮೇಳನ ನಡೆಸಲು ಈಗಾಗಲೇ ಮೂರ್ನಾಲ್ಕು ಸ್ಥಳಗಳನ್ನು ಪರಿಶೀಲಿಸಲಾಗಿದೆ. ರಾಜ್ಯಾಧ್ಯಕ್ಷರು ಆಗಮಿಸಿ ಮತ್ತೊಮ್ಮೆ ಪರಿಶೀಲಿಸಿ ಸ್ಥಳ ಅಂತಿಮಗೊಳಿಸಲಿದ್ದಾರೆ ಎಂದರು.